ಹೊಸಪೇಟೆ ಬಸ್ ನಿಲ್ದಾಣಕ್ಕೆ ಡಿಸಿಎಂ ಸವದಿ ದಿಢೀರ್ ಭೇಟಿ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ : ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ಬಸ್ ನಿಲ್ದಾಣಕ್ಕೆ ಶುಕ್ರವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಡೀ ಬಸ್ ನಿಲ್ದಾಣದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದರು ಮತ್ತು ಪ್ರಯಾಣಿಕರೊಂದಿಗೆ ಸಂವಾದ ಮಾಡಿದರು. ಪ್ರಯಾಣಿಕರ ಆರೋಗ್ಯದ ಹಿತದೃಷ್ಟಿಯಿಂದ ಸ್ಯಾನಿಟೈಜರ್ ಮಾಸ್ಕ್, ಕಡ್ಡಾಯವಾಗಿ ಬಳಕೆ ಮಾಡುವಂತೆ ತಿಳಿಸಿದರು. ಸಾಮಾಜಿಕ ಅಂತರ ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
     
ಎನ್‍ಇಕೆಎಸ್‍ಆರ್‍ಟಿಸಿ ವಿಭಾಗೀಯ ಅಧಿಕಾರಿ ಸೀನಯ್ಯ ಹಾಗೂ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter