ಕೋವಿಡ್-19 ಆಸ್ಪತ್ರೆಯಿಂದ ಮತ್ತಿಬ್ಬರು ಡಿಸ್ಚಾರ್ಜ್

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಕೋವಿಡ್-19ನಿಂದ ಜಿಲ್ಲೆಯ ಮತ್ತಿಬ್ಬರು ಇಂದು ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಶುಕ್ರವಾರ ಸಂಜೆ ಬಿಡುಗಡೆ ಮಾಡಲಾಯಿತು. ಇದರಿಂದಾಗಿ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 15ಕ್ಕೇರಿದ್ದು, ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 14ಕ್ಕಿಳಿದಿದೆ.

43 ವರ್ಷದ ಪಿ-657 ಎಂಬ ಈ ವ್ಯಕ್ತಿಯು ಕೌಲ್‍ಬಜಾರ್ ಪ್ರದೇಶದ ಜಾಗೃತಿನಗರ ಬಡವಾಣೆಯವರಾಗಿದ್ದು, ಇವರು ಉತ್ತರಖಾಂಡ್ ನಿಂದ ಬಳ್ಳಾರಿಗೆ ಪ್ರಯಾಣಿಸಿದ ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ.ಪಿ-712 38 ವರ್ಷದ ಮಹಿಳೆಯು ಸಂಡೂರಿನ ಕೃಷ್ಣ ನಗರದವರಾಗಿದ್ದು ಇವರಿಗೆ ದಾವಣಗೆರೆ ಜಿಲ್ಲೆಯ ಸೋಂಕಿತರ ಸಂಪರ್ಕದಿಂದ ಸೋಂಕು ಹರಡಿರುವ ಹಿನ್ನೆಲೆ ಇದೆ.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದ ಪಿ-657 ಹಾಗೂ ಪಿ-712 ಅವರಿಗೆ ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ನಂತರ ಅವರಿಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗುವ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು, ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿದೆವು. ಆತ್ಮ ಸ್ಥೈರ್ಯವನ್ನು ತುಂಬಿ ಅವರನ್ನು ಗುಣಮುಖರಾಗಲು ಬಹಳ ಶ್ರಮವಹಿಸಿದೆವು; ಪಿ-712 ಅವರು ಬರೀ 14 ದಿನಗಳಲ್ಲಿ ಗುಣಮುಖರಾಗಿದ್ದು,. ಪಿ-657 ಅವರು 18 ದಿನಗಳಲ್ಲಿ ಗುಣಮುಖರಾಗಿದ್ದಾರೆ. ಇದರಿಂದ ನಮಗೆ ತುಂಬಾ ಸಂತೋಷವಾಗಿದ್ದು ಇನ್ನು ಉಳಿದವರನ್ನು ಆದಷ್ಟು ಬೇಗ ಗುಣಮುಖರನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದರು.

 ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ಯೋಗಾನಂದರೆಡ್ಡಿ, ಆರ್.ಎಂ.ಓ.ಡಾ.ಪ್ರಕಾಶ, ಡಾ.ಅನಿಲ್, ಡಾ.ಲಿಂಗರಾಜು, ಡಾ.ವಿಶ್ವನಾಥ್, ಡಾ.ಚಂದ್ರಬಾಬು, ಡಾ.ಹುಗ್ಲಿ ವಿಶ್ವನಾಥ್, ಡಾ.ರಾಘವೇಂದ್ರ,ಡಾ.ಜ್ಞಾನೇಶ್, ಗುಮಾಸ್ತೆ ದೇಸಾಯಿ, ಡಾ.ಸುನೀಲ್, ಶುಶ್ರೂμÁ ಅಧೀಕ್ಷಕಿ ಶಾಂತಾಬಾಯಿ, ಡಾ.ಉಮಾಮಹೇಶ್ವರಿ, ಡಾ.ಚಿತ್ರಶೇಖರ, ಡಾ.ಉದಯಶಂಕರ, ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರ ಸಿಬ್ಬಂದಿಗಳು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter