ಖಾಸಗಿ ಬಸ್‍ಗಳ ಪ್ರಯಾಣದರ ಶೇ.15 ರಷ್ಟು ಹೆಚ್ಚಳ-

Share on facebook
Share on twitter
Share on linkedin
Share on whatsapp
Share on email

ರಾಯಚೂರು: ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ರಾಜ್ಯದಾದ್ಯಂತ ಎಲ್ಲಾ ಖಾಸಗಿ ಬಸ್‍ಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಆದರೇ ನಾಳೆಯಿಂದ ಖಾಸಗಿ ಬಸ್‍ಗಳು ಸಂಚರಿಸಲಿವೆ. ಶೇ.15 ರಷ್ಟು ಪ್ರಯಾಣದರ ಹೆಚ್ಚಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.


ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ನಾಳೆಯಿಂದ ರಾಜ್ಯದಾದ್ಯಂತ ಎಲ್ಲಾ ಖಾಸಗಿಬಸ್‍ಗಳು ಸಂಚರಿಸಲಿವೆ. ಆದರೇ ಬಸ್‍ನಲ್ಲಿ 30 ಜನರಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಕರೆದೊಯ್ಯಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಖಾಸಗಿ ಬಸ್‍ಗಳ ಮಾಲೀಕರ ಸಭೆ ನಡೆಸಲಾಗಿದ್ದು, ಕೇವಲ 30 ಜನರನ್ನು ಕರೆದೊಯ್ಯುವುದರಿಂದ ನಷ್ಟವಾಗಲಿದೆ ಎಂದು ಖಾಸಗಿ ಮಾಲೀಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂಧಿಸಿ ಶೇ.15ರಷ್ಟು ಪ್ರಯಾಣದರ ಹೆಚ್ಚಿಸಿಕೊಂಡು ಸಂಚರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಪ್ರಯಾಣಿಕರ ಸಂಪೂರ್ಣ ಮಾಹಿತಿಯನ್ನು ಕಲೆಹಾಕಿದ ನಂತರ ಬಸ್‍ಗಳು ಸಂಚರಿಸಬೇಕು. ಮಾಹಿತಿ ಸಂಗ್ರಹಿಸಿರುವ ಕುರಿತು ಪ್ರತಿನಿತ್ಯ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಹಸಿರು ವಲಯದಿಂದ ಕೆಂಪು ವಲಯವಾಗಿ ಮಾರ್ಪಟ್ಟಿರುವ ಝೋನ್‍ಗಳಲ್ಲಿ ಜನರು ಮನೆಯಿಂದ ಹೊರ ಬರುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *