ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ : ಅರ್ಜಿ ಆಹ್ವಾನ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ ಎಂದು ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2020-21 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಛೇರಿಗಳಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ ರೂ. 15ಸಾವಿರ ಗಳ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾμÉ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗಧಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೆÇೀರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ನ.05 ಕೊನೆಯ ದಿನಾಂಕವಾಗಿರುತ್ತದೆ.  

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಆವರಣ ಬಳ್ಳಾರಿ. ಕಚೇರಿಗೆ ಅಥವಾ ಕಚೇರಿಯ ದೂ:08392-275198 ಅಥವಾ ದೂ.ಸಂ.9480841243 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter