ಬಳ್ಳಾರಿ: ಬಳ್ಳಾರಿ ಜಿಲ್ಲೆಯ ರೈತರು ಬೆಳೆದ ಕಬ್ಬನ್ನು ಖರೀದಿಸುವ ವಿವಿಧ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಆಯುಕ್ತರು ಮತ್ತು ನಿರ್ದೇಶಕರು 2020-21ನೇ ಸಾಲಿಗೆ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆ(ಜಿಚಿiಡಿ ಚಿಟಿಜ ಖemuಟಿeಡಿಚಿಣive Pಡಿiಛಿe) ಗಳನ್ನು ನಿಗದಿಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿಯ ಶಾಮನೂರು ಸಕ್ಕರೆ ಕಾರ್ಖಾನೆಗೆ 2708 ರೂ.ಗಳನ್ನು ಮತ್ತು ಹೂವಿನಹಡಗಲಿ ತಾಲ್ಲೂಕಿನ ಬೀರಬ್ಬಿ ಗ್ರಾಮದ ಮೈಲಾರ ಸಕ್ಕರೆ ಕಾರ್ಖಾನೆಗೆ 2718 ರೂ.ಗಳನ್ನು ನಿಗದಿಪಡಿಸಲಾಗಿದೆ. ಕಬ್ಬು ಬೆಳೆಗಾರರು ಇದನ್ನು ಗಮನಿಸಬೇಕು ಎಂದು ಅವರು ತಿಳಿಸಿದ್ದಾರೆ.


