ಮಾಂಸ, ಕೋಳಿ ಮಾರುಕಟ್ಟೆಗೆ ಮೇ 24 ರಂದು ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಕೊರೋನಾ ವೈರಾಣು ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಗೃಹ ಮಂತ್ರಾಲಯದ ಆದೇಶದಂತೆ ಮೇ 24 ಮತ್ತು ಮೇ 31ರ ಭಾನುವಾರದಂದು ದಿನನಿತ್ಯದ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಸಂಪೂರ್ಣ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆ, ಮೇ 24 ರಂದು ಬೆಳಿಗ್ಗೆ 11 ಗಂಟೆಯವರೆಗೆ ಮಾತ್ರ ಮಾಂಸ ಮತ್ತು ಕೋಳಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮಾಂಸ ಮತ್ತು ಕೋಳಿ ಮಾರಾಟ ಮಾಡುವ ಅಂಗಡಿ ಮಾಲೀಕರು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರ್ವಜನಿಕರಿಗೆ ಖರೀದಿಸಲು ಅವಕಾಶ ಮಾಡಿಕೊಡುವುದರೊಂದಿಗೆ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕಾಗಿ‌ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *