ವಲಸೆ ಕಾರ್ಮಿಕರನ್ನು ಸರ್ಕಾರಿ ವೆಚ್ಚದಲ್ಲೇ ಸುರಕ್ಷಿತವಾಗಿ ಕಳುಹಿಸಲಾಗುವುದು

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು : ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಒಡಿಶಾ ಮತ್ತು ಈಶಾನ್ಯ ರಾಜ್ಯಗಳ ವಲಸೆ ಕಾರ್ಮಿಕರು ಭಾರಿ ಸಂಖ್ಯೆಯಲ್ಲಿ ಆಗಮಿಸಿ ಗೊಂದಲ ಉಂಟಾಗಿದ್ದನ್ನು ಗಮನಿಸಿ ವೈದ್ಯಕೀಯ ಶಿಕ್ಷಣ ಸಚಿವರೇ ಖುದ್ದು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ ಘಟನೆ ಶನಿವಾರ ಅರಮನೆ ಮೈದಾನದ ಬಳಿ ನಡೆಯಿತು.


ಇಲ್ಲಿ ನೆರೆದಿದ್ದ ಜನರುದ್ದೇಶಿಸಿ ಮಾತನಾಡಿದ ಸಚಿವರು, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಸರ್ಕಾರದ ವೆಚ್ಚದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅದಕ್ಕೆ ಬೇಕಾದ ಎಲ್ಲಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೀವು ನಿಮ್ಮ ಊರಿಗೆ ಹೋಗಲು ಹೆಚ್ಚುವರಿ ಬೋಗಿಗಳನ್ನು ಒದಗಿಸಲು ರೈಲ್ವೆ ಸಚಿವರಿಗೂ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.


ಇದಕ್ಕೂ ಮುನ್ನ ತಪ್ಪು ಮಾಹಿತಿಯಿಂದಾಗಿ ಮಣಿಪುರ, ಒಡಿಶಾ ರಾಜ್ಯಗಳ ಸಾವಿರಾರು ಮಂದಿ ಜಮಾಯಿಸಿದ್ದ ಹಿನ್ನೆಲೆಯಲ್ಲಿ ಈ ಗೊಂದಲ ಉಂಟಾಗಿತ್ತು. ಸುಮಾರು ಒಂದೂವರೆ ಸಾವಿರ ಮಂದಿಗೆ ಆಯಾ ರಾಜ್ಯಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಿಕೊಂಡು ಸೇವಾಸಿಂಧು ಆ್ಯಪ್ ಮೂಲಕ ಮೊಬೈಲ್ ಗಳಿಗೆ ಸಂದೇಶ ರವಾನಿಸಲಾಗಿತ್ತು. ಆ ಸಂದೇಶ ಅವರಲ್ಲೇ ಫಾರ್ವರ್ಡ್‌ ಆಗಿ ಇಂದು ಪ್ರಯಾಣಕ್ಕೆ ಆಯ್ಕೆ ಆಗದಿದ್ದವರೂ ನೂರಾರು ಸಂಖ್ಯೆ ಯಲ್ಲಿ ಆಗಮಿಸಿ ಭಾರಿ ದಟ್ಟಣೆ ಉಂಟಾಗಿತ್ತು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *