ಶ್ರೀರಾಮುಲು ‘ಆಸ್ಪತ್ರೆ ವಾಸ್ತವ್ಯ’

Share on facebook
Share on twitter
Share on linkedin
Share on whatsapp
Share on email


ಚಾಮರಾಜನಗರ:ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಇದೇ ಮೊದಲ ಬಾರಿಗೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ತಮ್ಮ ‘ಆಸ್ಪತ್ರೆ ವಾಸ್ತವ್ಯ’ಕ್ಕೆ ಮಂಗಳವಾರ ಸಂಜೆ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರವಾಸ ನಡೆಸಿ ಅಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡುವ ಮೂಲಕ ಅಲ್ಲಿಗೆ ಭೇಟಿ ನೀಡುವ ಜನರ ಸಮಸ್ಯೆಗಳು ಮತ್ತು ಆರೋಗ್ಯ ಸೇವೆಯ ಕುರಿತು ಮಾಹಿತಿ ಕಲೆ ಹಾಕುವುದಾಗಿ ತಿಳಿಸಿದರು. ಅವರು ಮಂಗಳವಾರ ರಾತ್ರಿ ಆಸ್ಪತ್ರೆಯಲ್ಲೇ ತಂಗಿದ್ದರು.

ವಸತಿ ಗೃಹ, ಪ್ರವಾಸಿ ಬಂಗ್ಲೆಗಳು ಇಲ್ಲವೇ ಐಷಾರಾಮಿ ಹೋಟೆಲ್ ಗಳಲ್ಲಿ ವಾಸ್ತವ್ಯ ಹೂಡುವ ಬದಲು ಆಸ್ಪತ್ರೆಯಲ್ಲಿ ನೆಲೆಸುತ್ತೇನೆ. ಇದರಿಂದ ರೋಗಿಗಳು, ಅವರ ಸಂಬಂಧಿಕರು ಹಾಗೂ ಆಸ್ಪತ್ರೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯುತ್ತದೆ ಎಂದರು.
ಇದಕ್ಕೂ ಮುನ್ನ ಅವರು ರೋಗಿಗಳೊಂದಿಗೆ ಮಾತುಕತೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter