ರೈತರ ಅನುಕೂಲಕ್ಕಾಗಿ ಕೃಷಿ ತಿದ್ದುಪಡಿ ಮಸೂದೆ

Share on facebook
Share on twitter
Share on linkedin
Share on whatsapp
Share on email

ನವದೆಹಲಿ: ಎನ್ ಡಿಎ ಸರ್ಕಾರದ ಕೃಷಿ ನೀತಿ -ಮಸೂದೆಗಳ ಬಗ್ಗೆ ರೈತರನ್ನು ವಿಪಕ್ಷಗಳು ಹಾದಿ ತಪ್ಪಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.


ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ ಸ್ಥಾಪನೆ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಕೆಲವು ವರ್ಷಗಳಲ್ಲಿ ಎನ್ ಡಿ ಸರ್ಕಾರ, ರೈತರನ್ನು ಬ್ಯಾಂಕ್ ಗಳೊಂದಿಗೆ ಸಂಪರ್ಕಿಸಲು ಸಂಪೂರ್ಣ ಪ್ರಯತ್ನ ಮಾಡಿದೆ. ರೈತರ ಅನುಕೂಲಕ್ಕಾಗಿ ಕೃಇಷಿ ತಿದ್ದುಪಡಿ ಮಸೂದೆ ಜಾರಿಗೆ ತರಲಾಗಿದೆ ಅವರು ಒತ್ತಿ ಹೇಳಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಸುಮಾರು 1 ಲಕ್ಷ ಕೋಟಿ ರೂಪಾಯಿ ಹಣವನ್ನು 10 ಕೋಟಿ ರೈತರಿಗೆ ವರ್ಗಾವಣೆ ಮಾಡಲಾಗಿದೆ ಎಂದರು.
ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ರೈತರ ಕಲ್ಯಾಣಕ್ಕಾಗಿ ಹಲವು ಸುಧಾರಣೆ ತಂದಿದೆ. ಕೃಷಿ ಮಸೂದೆ ಬಗ್ಗೆ ಹರಿದಾಡುತ್ತಿರುವ ವದಂತಿ ಹಾಗೂ ಸುಳ್ಳುಗಳಿಗೆ ಅಂತ್ಯ ಹಾಡಬೇಕು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter