ಬಳ್ಳಾರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ 2020-21 ನೇ ಸಾಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಜಿಲ್ಲೆಯದಾದ್ಯಂತ 80 ಜಾನಪದ ಕಲಾ ಪ್ರರ್ದಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಬುರಗಿ ವಿಭಾಗಮಟ್ಟದಲ್ಲಿ ಕಲಬುರಗಿಯಲ್ಲಿ 3 ದಿನಗಳ ಕಲಾ ತಂಡ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲೆಯ ಕಲಾತಂಡಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಾಗಲೇ ಬೇರೆ ಬೇರೆ ಇಲಾಖೆಗಳ ಕಾರ್ಯಕ್ರಮಗಳನ್ನು ಪ್ರದರ್ಶನ ಮಾಡಿರುವ ಮತ್ತು ಅರ್ಜಿ ನಮೂನೆಯಲ್ಲಿ ಕೇಳಿರುವ ದಾಖಲಾತಿಗಳನ್ನು ಸಲ್ಲಿಸುವ ತಂಡಗಳನ್ನು ಜಿಲ್ಲಾ ಜಾನಪದ ಕಲಾ ತಂಡದ ಆಯ್ಕೆ ಸಮಿತಿ ಮೂಲಕ ಆಯ್ಕೆಮಾಡಲಾಗುತ್ತ್ತದೆ.
ಅರ್ಜಿ ಸಲ್ಲಿಸುವವರು ಕಲಾತಂಡದ ಅಧೀಕೃತ ನೊಂದಣಿಯಾಗಿರಬೇಕು. ಇಲಾಖೆಯವರು ಸೂಚಿಸಿದ ಹಳ್ಳಿಗಳಲ್ಲಿ ಕಾರ್ಯಕ್ರಮ ನಡೆಸುವುದು. ಪ್ರತಿ ದಿನ 2 ಕಾರ್ಯಕ್ರಮಗಳನ್ನು ನಡೆಸುವುದು. ಪ್ರತಿ ತಂಡದಲ್ಲಿ 8 ಜನ ಇರಬೇಕು. (ಕನಿಷ್ಟ ಇಬ್ಬರು ಮಹಿಳಾ ಕಲಾವಿದರು ಕಡ್ಡಾಯ). ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ನೊಂದಣಿಯಾಗಿರುವ ತಂಡದ ಖಾತೆ ಪಾಸ್ಬುಕ್ ಹೊಂದಿರಬೇಕು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಮತ್ತು ಸಾರ್ವನಿಕ ಸಂಪರ್ಕ ಇಲಾಖೆ, ಸಂಗೀತ ಮತ್ತು ನಾಟಕ ಅಕಾಡೆಮಿ ಅಡಿಯಲ್ಲಿ ನೊಂದಣಿಯಾಗಿ ಈಗಾಗಲೇ ಸರ್ಕಾರಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಜಾನಪದ ಕಲಾತಂಡದ ಮೂಲಕ ಪ್ರರ್ದಶನವನ್ನು ನೀಡಿರುವ ಹಾಗೂ ಪ್ರಸ್ತುತ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಇಚ್ಛೆ ಉಳ್ಳವರು ಅರ್ಜಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಐಇಸಿ ವಿಭಾಗದಲ್ಲಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಅದೇ ಕಚೇರಿಗೆ ಡಿ.1 ರೊಳಗೆ ಖುದ್ದಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಮೊ: 9845715229ಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.