2021ರ ಟಿ20ಐ ವಿಶ್ವಕಪ್‍ಗೆ ತಾಣಗಳ ಘೋಷಿಸಿದ ಬಿಸಿಸಿಐ

Share on facebook
Share on twitter
Share on linkedin
Share on whatsapp
Share on email

ನವದೆಹಲಿ: 2021ರ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್‍ನ ಆತಿಥ್ಯವನ್ನು ಭಾರತ ವಹಿಸಿಕೊಂಡಿದೆ. ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷರ ಟಿ20ಐ ವಿಶ್ವಕಪ್ ಏಳನೇ ಆವೃತ್ತಿ ಭಾರತದಲ್ಲಿ ಅಕ್ಟೋಬರ್-ನವೆಂಬರ್‍ನಲ್ಲಿ ನಡೆಯಲಿದೆ.ನಿಜವಾಗಿಯೂ ಈ ಟಿ20ಐ ವಿಶ್ವಕಪ್ ಟೂರ್ನಿ ಆಸ್ಟ್ರೇಲಿಯಾದಲ್ಲಿ 2020ರ ಅಕ್ಟೋಬರ್ 18ರಿಂದ ನವೆಂಬರ್ 15ರ ವರೆಗೆ ನಡೆಯಬೇಕಿತ್ತು. ಆದರೆ ಕೊರೊನಾವೈರಸ್ ಕಾರಣದಿಂದಾಗಿ ಟೂರ್ನಿ ಒಂದು ವರ್ಷ ಮುಂದೂಡಲ್ಪಟ್ಟಿತು. ಭಾರತದಲ್ಲಿ ಟೂರ್ನಿ ಆಯೋಜಿಸಲು ಐಸಿಸಿ ನಿರ್ಧರಿಸಿತು. 2021ರ ಟಿ20ಐ ವಿಶ್ವಕಪ್‍ನಲ್ಲಿ ಒಟ್ಟು 16 ತಂಡಗಳು ಪಾಲ್ಗೊಳ್ಳಲಿವೆ. ಟೂರ್ನಿಯು ಒಟ್ಟು 45 ಪಂದ್ಯಗಳನ್ನು ಒಳಗೊಂಡಿರಲಿದೆ. ಟೂರ್ನಿಯ ಪಂದ್ಯಗಳು ಎಲ್ಲೆಲ್ಲಿ ನಡೆಯಲಿವೆ ಎಂಬುದು ಇನ್ನೂ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ನಿರ್ಧರಿಸಿರಲಿಲ್ಲ.

2021ರ ಟಿ20ಐ ವಿಶ್ವಕಪ್ ನಡೆಯುವ ತಾಣಗಳು
ಅಹಮದಾಬಾದ್, ಬೆಂಗಳೂರು, ಕೋಲ್ಕತ್ತಾ, ಚೆನ್ನೈ, ಮುಂಬೈ, ದೆಹಲಿ, ಮೊಹಾಲಿ, ಧರ್ಮಶಾಲಾ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter