ಪಕ್ಷ ಸಂಘಟನೆಗಾಗಿ ಸೆ. 27, 28 ಕಾಂಗ್ರೆಸ್ ಹಿರಿಯ ನಾಯಕರ ಸಭೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಪಕ್ಷ ಸಂಘಟನೆಗಾಗಿ ಕಾಂಗ್ರೆಸ್ ಸೆ.27 ಮತ್ತು 28ರಂದು ಸರಣಿ ಸಭೆ ಕರೆದಿದೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿಯಾಗಿ ರಂದೀಪ್ ಸಿಂಗ್ ಸುರ್ಜೆವಾಲಾ ಜವಾಬ್ದಾರಿ ವಹಿಸಿಕೊಂಡ ಬಳಿಕ ಪಕ್ಷದ ಸಂಘಟನೆ ಕೆಲಸಕ್ಕೆ ಕೈಹಾಕಿದ್ದು, 27ರಂದು ಅರಮನೆ ಮೈದಾನದಲ್ಲಿರುವ ವೈಟ್ ಪೆಟಲ್ಸ್ ನಲ್ಲಿ ಹಿರಿಯ ನಾಯಕರ ಸಭೆ ಕರೆದಿದ್ದಾರೆ.


ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯಸಭೆ, ಲೋಕಸಭೆ ಸದಸ್ಯರು, ವಿಧಾನಸಭಾ ಚುನಾವಣೆ ಅಭ್ಯರ್ಥಿಗಳು, ಎಐಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳು, ಸೆಲ್ ವಿಭಾಗದ ಮುಖ್ಯಸ್ಥರಿಗೆ ಆಹ್ವಾನ ನೀಡಲಾಗಿದೆ.


ಸೆ. 28ರಂದು ಪಕ್ಷದ ಕಚೇರಿಯಲ್ಲಿ ಹಿರಿಯ ನಾಯಕರು ಮತ್ತು ಕಾರ್ಯಕರ್ತರನ್ನು ರಂದೀಪ್ ಸಿಂಗ್ ಸುರ್ಜೆವಾಲ ಭೇಟಿ ಮಾಡಲಿದ್ದಾರೆ. ಪದಾಧಿಕಾರಿ ಆಯ್ಕೆ, ಉಸ್ತುವಾರಿಗಳ ಆಯ್ಕೆ ಸೇರಿದಂತೆ ವಿವಿಧ ಚಟುವಟಿಕಳಿಗೆ ಸಂಬಂಧಪಟ್ಟಂತೆ ಈ ಎರಡು ದಿನಗಳ ಸಭೆ ನಡೆಸಲಾಗುತ್ತಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter