ಬೃಹತ್ ನೀರಾವರಿ ಯೋಜನೆ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ನ.26ರಂದು

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ:ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದ ನಿಯಮಿತದ ವತಿಯಿಂದ 243.35 ಕೋಟಿ ರೂ.ಗಳ ವೆಚ್ಚದಲ್ಲಿ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಪಾಪಿನಾಯನಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬೃಹತ್ ನೀರಾವರಿ ಯೋಜನೆಯ ಕಾಮಗಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದದಿಂದ ವರ್ಚುವಲ್ ತಂತ್ರಜ್ಞಾನದ ಮೂಲಕ ನ.26ರಂದು ಸಂಜೆ 4ಕ್ಕೆ ಉದ್ಘಾಟಿಸಲಿದ್ದಾರೆ.
ಸಿಎಂ ಅವರು ವರ್ಚುವಲ್ ತಂತ್ರಜ್ಞಾನದ ಮೂಲಕ ಉದ್ಘಾಟಿಸಿದರೇ ಪಾಪಿನಾಯಕನಳ್ಳಿ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅರಣ್ಯ,ಪರಿಸರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್,ಸಂಸದ ವೈ.ದೇವೇಂದ್ರಪ್ಪ, ಶಾಸಕರು,ಜಿಪಂ,ತಾಪಂ,ಗ್ರಾಪಂ ಅಧ್ಯಕ್ಷರು,ಸದಸ್ಯರು ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter