ವಸ್ತçವಿನ್ಯಾಸ ತರಬೇತಿ : ಮಹಿಳೆಯರಿಂದ ಅರ್ಜಿ ಅಹ್ವಾನ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ : ಜಿಲ್ಲಾ ಪಂಚಾಯತ್‌ನ ಕೈಗಾರಿಕೆ ಇಲಾಖೆ ವಿಭಾಗದವತಿಯಿಂದ 2020-21ನೇ ಸಾಲಿನ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮೀಣ ಭಾಗದ ಮಹಿಳೆಯರಿಗೆ ವಸ್ತçವಿನ್ಯಾಸ(ಹೊಲಿಗೆ) ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಪಂ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
18 ರಿಂದ 35 ವರ್ಷದೊಳಗಿನ ಮಹಿಳೆಯಾಗಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಉತ್ತೀರ್ಣರಾಗಿರಬೇಕು. ಗ್ರಾಮೀಣ ಪ್ರದೇಶದ ಮಹಿಳೆಯಾಗಿರಬೇಕು. ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ ಹೊಂದಿರಬೇಕು.    

ಆಸಕ್ತ ಮಹಿಳೆಯರು ಅರ್ಜಿಯನ್ನು ಜಿಲ್ಲಾ ಪಂಚಾಯತ್‌ನ ಕೈಗಾರಿಕಾ ಕೇಂದ್ರ ವಿಭಾಗದ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಡಿ.31ರೊಳಗಾಗಿ ಅದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂಖ್ಯೆ.08392-242270 ಅಥವಾ ಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ವಿಭಾಗದ ಮೊ.8496941852, ಬಳ್ಳಾರಿ, ಹೊಸಪೇಟೆ, ಸಂಡೂರು, ಕೂಡ್ಲಿಗಿ ವಿಭಾಗದ ಮೊ. 8073423502, 9035351063ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter