ಶೀಘ್ರ ಸಂಪುಟ ವಿಸ್ತರಣೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ರಾಜ್ಯದ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮತ್ತೊಮ್ಮೆ ಭೇಟಿ ಮಾಡಿ, ಮಾತುಕತೆ ನಡೆಸಿದ ನಂತರ ತೀರ್ಮಾನ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಈಗಷ್ಟೇ ದೂರವಾಣಿಯಲ್ಲಿ ಕೇಂದ್ರ ಗೃಹ ಸಚಿವರ ಅಮಿತ್ ಷಾ ಜತೆ ಮಾತನಾಡಿದ್ದು, ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ಪಟ್ಟಿ ಕಳುಹಿಸಿಕೊಡುವುದಾಗಿ ಹೇಳಿದ್ದು, ವಿಸ್ತರಣೆ ವಿಷಯ ಸುಗಮವಾಗಿ ಬಗೆಹರಿಯಲಿದ್ದು, ಸಿಹಿಸುದ್ದಿ ದೊರಕಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವೀರಶೈವ ಲಿಂಗಾಯಿತರನ್ನು ಓಬಿಸಿಗೆ ಸೇರಿಸುವ ಬಗ್ಗೆ ವಿಚಾರ ಇಂದು ಯಾವುದೇ ತೀರ್ಮಾನ ಮಾಡುವುದಿಲ್ಲ.ಮಹತ್ವದ ಕಾರಣಕ್ಕೆ ಲಿಂಗಾಯಿತರನ್ನು ಬಗ್ಗೆ ಓಬಿಸಿಗೆ ಸೇರಿಸಲು ನಿರ್ಧರಿಸಿದ್ದೆವು.ಆದರೆ ದೆಹಲಿಗೆ ಹೋಗಿ ಪ್ರಮುಖರು ಹಾಗೂ ತಜ್ಞರ ಜೊತೆ ಚರ್ಚಿಸಿದ ಬಳಿಕ ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.

ಅಲ್ಲಿಯವರೆಗೆ ಯಾವುದೇ ಆತುರದ ತೀರ್ಮಾನ ಕೈಗೊಳ್ಳದಂತೆ ಸಂಪುಟ ಸಹೋದ್ಯೋಗಿಗಳು ಸಲಹೆ ಮಾಡಿದ್ದಾರೆ.ಹಾಗಾಗಿ ದೆಹಲಿಗೆ ಹೋಗಿ ಬಂದ ಬಳಿಕವಷ್ಟೇ ಲಿಂಗಾಯತ ಮೀಸಲಾತಿ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ.ಮೀಸಲಾತಿ ಸಂಬಂಧ ತಜ್ಞರ ಸಮಿತಿ ರಚನೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter