ಇಂದು ಸಂಜೆ ಸಚಿವ ಸಂಪುಟ ಸಭೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ನಾಲ್ಕನೇ ಹಂತದ ಲಾಕ್‌ಡೌನ್‌ ಮುಕ್ತಾಯಗೊಳ್ಳಲು ಇನ್ನು ಕೆಲವೇ ದಿನಗಳು ಬಾಕಿ ಇರುವ ಮಧ್ಯೆಯೇ ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ವಿಧಾನ ಪರಿಷತ್ ಚುನಾವಣೆ, ಕೊರೊನಾ ನಿಯಂತ್ರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ವಿಶೇಷವಾಗಿ ಕರ್ನಾಟಕ ರಾಜ್ಯ ವಿಧಾನ ಪರಿಷತ್‌ಗೆ ಐವರು ನಾಮನಿರ್ದೇಶನ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ. ವಿಧಾನ ಪರಿಷತ್ ಗೆ ಐವರು ಸದಸ್ಯರ ನಾಮ ನಿರ್ದೇಶನ ಮಾಡಲು ಇಂದು ಸಂಜೆ ನಡೆಯುವ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ.

ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು‌ ರಾಜ್ಯಪಾಲರಿಗೆ ನಾಮ‌ ನಿರ್ದೇಶನ ಮಾಡಲು ತೀರ್ಮಾನಿಸಲಾಗಿದೆ. ಬಿಜೆಪಿಯಲ್ಲಿ ವಿಧಾನ ಪರಿಷತ್ ನಾಮ ನಿರ್ದೇಶನದ ಮೂಲಕ ಆಯ್ಕೆಯಾಗಲು ಲಾಭಿ ಜೋರಾಗಿ ನಡೆಯುತ್ತಿದೆ.
ಬಿಜೆಪಿ ಮುಖಂಡರಾದ ನಿರ್ಮಲ್ ಕುಮಾರ್ ಸುರಾನಾ, ನಟಿಯರಾದ ತಾರಾ ಅನುರಾಧ, ಶ್ರುತಿ, ಮಾಳವಿಕಾ ಅವಿನಾಶ್, ಮಹಿಳಾ ಮೋರ್ಚಾದ ಭಾರತಿ ಶೆಟ್ಟಿ, ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ, ನಟ ಜಗ್ಗೇಶ್, ಬಿಜೆಪಿ ರಾಜ್ಯ ಸಂಘಟನೆಯ ಕಾರ್ಯದರ್ಶಿ ಅರುಣ್ ಕುಮಾರ್ ಲಾಭಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಉಳಿದಂತೆ ಸಭೆಯಲ್ಲಿ, ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ 2020ಘಟನೋತ್ತರ ಅನುಮೋದನೆ ನೀಡುವ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಕನ್ನಡ ವಿಶ್ವವಿದ್ಯಾವಿಲಯ ಹಾಗೂ ಇತರೆ ಕೆಲವು ಕಾನೂನುಗಳು(ತಿದ್ದುಪಡಿ) ವಿಧೇಯಕ 2020ಕ್ಕೆ ಅನುಮೋದನೆ ನೀಡುವ ಬಗ್ಗೆ ಹಾಗೂ ಉಡುಪಿ ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನೂತನವಾಗಿ ಔಷಧ ಉಗ್ರಣಗಳನ್ನು 18.80 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ಸಾಧ್ಯತೆ ಇದೆ.

ಸದ್ಯ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಿಡಬ್ಲ್ಯುಡಿ ಕಾರ್ಯಪಾಲಕ ಅಭಿಯಂತರ ಬಿ ಜಿ ದಿವಾಕರರನ್ನು ಲೋಕಾಯುಕ್ತ ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಸೇವೆಯಿಂದ ಕಡ್ಡಾಯ ನಿವೃತ್ತಿಗೊಳಿಸುವ ಸಾಧ್ಯತೆ ಇದ್ದು, ಚಿಕ್ಕಬಳ್ಳಾಪುರ ನಂದಿ ಹೋಬಳಿ ಮೋಟ್ಲೂರು ಗ್ರಾಮದಲ್ಲಿ ಬೆಂಗಳೂರಿನ ನಿಸ್ಸಾರ್ ಎಜುಕೇಷನಲ್ ಟ್ರಸ್ಟ್‌ಗೆ 2.20 ಎಕರೆ ಜಮೀನು ಮಂಜೂರು ಮಾಡುವ ಸಂಭವವಿದೆ.

ಅದೇ ರೀತಿ, ಹೆಸರಘಟ್ಟದ ಇಟಗಲ್‌ಪುರದಲ್ಲಿ ಕರ್ನಾಟಕ ರಾಜ್ಯಪಾಲರ ಸಚಿವಾಲಯ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ನೀಡಿರುವ 4 ಎಕರೆಗೆ ಪರಷ್ಕೃತ ದರ ವಿಧಿಸಿ ಘಟನೋತ್ತರ ಅನುಮೋದನೆ ನೀಡುವ ನಿರೀಕ್ಷೆ ಇದೆ. ಕರ್ನಾಟಕ ಭಿಕ್ಷಾಟನೆ ನಿಷೇಧ( ತಿದ್ದುಪಡಿ) ವಿಧೇಯಕ 2020ಕ್ಕೆ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ
ಮಂಗಳೂರಿನ ಕೊಳವೂರು ಗ್ರಾಮದ ಸನ್ನಿಕಾಯಿಯ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಗೆ 19.95 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗುತ್ತದೆ.

ಕೋವಿಡ್ 19 ಪ್ರಕರಣ ತೀವ್ರ ಹೆಚ್ಚಳ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ಕಂಟೈನ್ಮೆಂಟ್ ಝೋನ್ ಗಳಲ್ಲಿ ಮತ್ತಷ್ಟು ಕಟ್ಟುನಿಟ್ಟಿನ‌ ಕ್ರಮ ಕೈಗೊಳ್ಳಲುವುದು ತೀರ್ಮಾನ ಸಾಧ್ಯತೆ. ಪೊಲೀಸ್ ಹಾಗೂ ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಹಬ್ಬುತ್ತಿರುವ ಬಗ್ಗೆಯೂ ಎಚ್ಚರಿಕೆ ವಹಿಸುವ ಬಗ್ಗೆ ಕೆಲವು ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.

ಕೆಎಸ್ ಆರ್ಟಿಸಿ ಮತ್ತು ಬಿ ಎಂ ಟಿ ಗಳನ್ನು ಬೆಳಗ್ಗೆ 6 ರಿಂದ ಸಂಜೆ 8ವರೆಗೆ ಹಾಗೂ ಲಾಂಗ್ ರೂಟ್ ಬಸ್ ಗಳನ್ನು ರಾತ್ರಿ ಇಡೀ ಸಂಚರಿಸಲು ಅನುಮತಿ ನೀಡುವ ನಿರೀಕ್ಷೆ ಇದೆ. ಸಾಮಾಜಿಕ ಅಂತರವನ್ನು ಕೈ ಬಿಟ್ಟು ಪೂರ್ಣ ಬಸ್ ಗಳಲ್ಲಿ‌ ಪ್ರಯಾಣಿಕರನ್ನು ಕರೆದೊಯ್ಯಲು ಅನುಮತಿ ನೀಡುವ ಬಗ್ಗೆ ಚರ್ಚೆ ನಡೆಯಲಿದೆ.
ಜೂನ್ 1ರಿಂದ ದೇವಸ್ಥಾನ, ಮಸೀದಿ, ದರ್ಗಾ, ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅನುವು ಮಾಡಿಕೊಡುವುದರ ಬಗ್ಗೆಯೂ ವ್ಯಾಪಕ ಚರ್ಚೆ ನಡೆಯುವ ಸಾಧ್ಯತೆ ಇದೆ. ಆದರೆ ಇದಕ್ಕೆ ಕಲವೊಂದು ನಿಬಂಧನೆಗಳನ್ನು ವಿಧಿಸುವ ಸಾಧ್ಯತೆ ದಟ್ಟವಾಗಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter