ಎಲ್ಲ ರೀತಿಯ ಜ್ವರ ಪ್ರಕರಣಗಳನ್ನು ತಪಾಸಣೆ ಮಾಡಿ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಎಲ್ಲ ರೀತಿಯ ಜ್ವರದ ಪ್ರಕರಣಗಳನ್ನು ಕಡ್ಡಾಯವಾಗಿ ತಪಾಸಣೆ ಮಾಡಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೋವಿಡ್-19 ಹಿನ್ನೆಲೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಡಿತರ ಪಡೆಯಲು ಒಟಿಪಿ ಕಡ್ಡಾಯಗೊಳಿಸಿರುವುದು ರದ್ದುಪಡಿಸಿ ರಿಜಿಸ್ಟರ್‍ನಲ್ಲಿ ಪಡಿತರ ಸಂಖ್ಯೆ ಮತ್ತು ಹೆಸರನ್ನು ನಮೂದಿಸಿಕೊಂಡು ಜನರಿಗೆ ಪಡಿತರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ ಪ್ರಾದೇಶಿಕ ಆಯುಕ್ತ ಎನ್.ವಿ.ಪ್ರಸಾದ್ ಅವರು ಕೊರೊನಾ ಸೊಂಕು ವ್ಯಾಪಕವಾಗಿ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ರೀತಿಯ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗದಿರುವುದು ಸಂತಸದ ಸಂಗತಿ;ಇದೇ ರೀತಿಯೇ ಮುಂದುವರಿಯಲಿ ಎಂದು ಆಶಿಸಿದ ಅವರು, ಕೋವಿಡ್-19ಗೆ ಬೇಕಾದ ಎಲ್ಲ ವೈದ್ಯಕೀಯ ಪರಿಕರಗಳು ಸಮರ್ಪಕವಾಗಿವೆಯೇ ಎಂಬುದರ ಕುರಿತು ಅಗತ್ಯ ಮಾಹಿತಿಯನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರಿಂದ ಪಡೆದುಕೊಂಡರು.

ಸ್ಯಾನಿಟೈಸರ್ ಕೊರತೆ ಇಲ್ಲ: ಜಿಲ್ಲೆಯಲ್ಲಿ ಯಾವುದೇ ರೀತಿಯ ಸ್ಯಾನಿಟೈಸರ್ ಕೊರತೆ ಇಲ್ಲ; ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹಾಗೂ ಗ್ರಾಪಂ ಹಂತದವರೆಗೆ ಈಗಾಗಲೇ ವಿತರಿಸಲಾಗಿದೆ. ದಾಸ್ತಾನು ಕೂಡ ಸಮರ್ಪಕವಾಗಿದೆ ಎಂದು ಸಭೆಯ ಗಮನಕ್ಕೆ ತಂದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಅಬಕಾರಿ ಇಲಾಖೆಯಿಂದ ಇತ್ತೀಚೆಗೆ ತರಿಸಿಕೊಳ್ಳಲಾದ 6850 ಮಿ.ಲೀ ಸ್ಯಾನಿಟೈಸರ್ ಜಿಲ್ಲೆಯಾದ್ಯಂತ ವಿತರಿಸಿದ ವಿವರಣೆ ನೀಡಿದರು. ಹರಪನಳ್ಳಿಯಲ್ಲಿಯೇ ಸ್ಯಾನಿಟೈಸರ್ ಉತ್ಪಾದಿಸಲಾಗುತ್ತಿದ್ದು,ಇದರ ಸಮಸ್ಯೆ ನಮ್ಮ ಜಿಲ್ಲೆಗಿಲ್ಲ ಎಂದರು.

ಈಗಾಗಲೇ ತರಬೇತಿ ಸಾಗಿದೆ ಎಂಬುದನ್ನು ವಿವರಿಸಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಈ ಕೊರೊನಾ ವೈರಸ್ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹ್ಯಾಂಡ್‍ವಾಶ್‍ಗೆ ವ್ಯವಸ್ಥೆ, ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಮಾರ್ಕ್ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
*ಕೋವಿಡ್-19 ಆಸ್ಪತ್ರೆಯನ್ನಾಗಿ ಬಳ್ಳಾರಿ ಜಿಲ್ಲಾಸ್ಪತ್ರೆ: ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಜಿಪಂ ಸಿಇಒ ಕೆ.ನಿತೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ, ವಿಮ್ಸ್ ನಿರ್ದೇಶಕ ಡಾ.ದೇವಾನಂದ ಮತ್ತಿತರರು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter