ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಮಾ.30ರಂದು ಮಧ್ಯಾಹ್ನದವರೆಗೆ 58777 ಜನರನ್ನು ತಪಾಸಣೆ ಮಾಡಲಾಗಿದೆ. ಸೋಮವಾರವೇ 14916 ಜನರನ್ನು ತಪಾಸಣೆ ಮಾಡಲಾಗಿದ್ದು, ಇದುವರೆಗೆ ಯಾವುದೇ ರೀತಿಯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಿಳಿಸಿದ್ದಾರೆ.

ಈ ಕುರಿತು ಮಿಡಿಯಾ ಬುಲೆಟಿನ್ ಬಿಡುಗಡೆ ಮಾಡಿರುವ ಅವರು, ಇಂದು 7 ಜನರ ಸ್ಯಾಂಪಲ್ ಪಡೆದು ಬೆಂಗಳೂರಿಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಇದುವರೆಗೆ 49 ಸ್ಯಾಂಪಲ್ಸ್ ಕಳುಹಿಸಲಾಗಿತ್ತು; 42 ನೆಗೆಟಿವ್ ಅಂತ ಬಂದಿದ್ದು, 7ರ ವರದಿ ಬರಬೇಕಿದ್ದು, ಅವರನ್ನು ಸದ್ಯ ಐಸೋಲೇಶನ್ ವಾರ್ಡ್‍ನಲ್ಲಿಡಲಾಗಿದೆ.

ಇಂದು 73 ಜನರಿಗೆ ಗೃಹಬಂಧನದಲ್ಲಿರಲು ಸೂಚಿಸಲಾಗಿದ್ದು, ಇದುವರೆಗೆ 536 ಜನರು ಗೃಹಬಂಧನದಲ್ಲಿದ್ದಾರೆ ಎಂಬುದರ ಮಾಹಿತಿಯನ್ನು ಬಿಚ್ಚಿಟ್ಟಿರುವ ಅವರು 216 ಜನರು ಗೃಹಬಂಧನವನ್ನ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, 320 ಜನರು ಮಾತ್ರ ಗೃಹಬಂಧನದಲ್ಲಿದ್ದಾರೆ ಎಂದಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter