ವಲಸಿಗರಿಗೆ ನೆರವು ಕೋರಿ ಪಿಐಎಲ್ ಸಲ್ಲಿಕೆ

Share on facebook
Share on twitter
Share on linkedin
Share on whatsapp
Share on email
ನವದೆಹಲಿ:ದೇಶಾದ್ಯಂತ ವಲಸಿಗ ಕಾರ್ಮಿಕರ ಪರದಾಟಕ್ಕೆ ಪರಿಹಾರ ಕಂಡುಹಿಡಿಯುವಂತೆ ಕೇಂದ್ರಕ್ಕೆ ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ.

ಪ್ರಕರಣ ಸಂಬಂಧ ಪ್ರಮಾಣ ಪತ್ರ ಸಲ್ಲಿಸಲು ಕೇಂದ್ರ ಸರ್ಕಾರ ಒಂದು ದಿನದ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ನ್ಯಾಯಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿತು.

ವಕೀಲ ಅಲಾಕ್ ಅಲೋಕ್ ಶ್ರೀವತ್ಸಾ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ನೂರಾರು ಕಾರ್ಮಿಕರು ತಮ್ಮ ತವರೂರು ಸೇರಲು ನೂರಾರು ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಸಂಚರಿಸಿದ್ದಾರೆ. ವಲಸಿಗ ಕಾರ್ಮಿಕರಿಗೆ ಆಹಾರ, ನೀರು, ವಸತಿ ಮತ್ತು ಸಾರಿಗೆಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಕೋರಿದ್ದಾರೆ.
Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter