ಶಿರಾ ಉಪಚುನಾವಣೆ ಹಿನ್ನೆಲೆ; ಪಕ್ಷದ ಮುಖಂಡರ ಸಭೆ ಕರೆದ ಕುಮಾರಸ್ವಾಮಿ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಪಾಲಿಗೆ ಪ್ರತಿಷ್ಠೆಯಾಗಿರುವ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 3ರಂದು ಉಪ ಚುನಾವಣೆ ನಿಗದಿಯಾಗಿದ್ದು, ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸ್ಥಳೀಯ ಮುಖಂಡರ ಸಭೆ ಕರೆದಿದ್ದಾರೆ.


ಈ ಸಂಬಂಧ ಜೆ.ಪಿ.ನಗರ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಶಿರಾ ಕ್ಷೇತ್ರವನ್ನು ಗೆಲ್ಲಬೇಕಾದ ಅನಿವಾರ್ಯತೆ ಇದೆ. ಆ ಕ್ಷೇತ್ರದ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಜೊತೆ ಇವತ್ತು ಸಭೆ ನಡೆಸುತ್ತೇನೆ. ಶಿರಾ ಮತ್ತು ಆರ್ ಆರ್ ನಗರ ಎರಡೂ ಕ್ಷೇತ್ರ ಗಳನ್ನು ಗೆಲ್ಲಲು ನಮ್ಮದೇ ಆದ ತಂತ್ರಗಾರಿಕೆ ಮಾಡುತ್ತೇವೆ ಎಂದರು.


ಜೆಡಿಎಸ್ ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ತಂತ್ರ ಹೆಣೆಯಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಕುತಂತ್ರದ ರಾಜಕಾರಣಕ್ಕೆ ಜೆಡಿಎಸ್ ತಂತ್ರ ಹೆಣೆಯಲಿದೆ. ಉಪ ಚುನಾವಣೆಯಲ್ಲಿ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳನ್ನೂ ಎದುರಿಸಲಿದೆ. ಎರಡೂ ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆ ಗೆಲ್ಲಬೇಕಿದೆ. ಕಾರ್ಯಕರ್ತರ, ಉಪ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳ ಅಭಿಪ್ರಾಯದೊಂದಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು.


ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಶಿರಾ ಮೂಲತಃ ಜೆಡಿಎಸ್ ಕ್ಷೇತ್ರ. ರಾಜರಾಜೇಶ್ವರಿ ನಗರವೂ ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಅಚಲವಾಗಿದೆ. ಸೂಕ್ತ, ನ್ಯಾಯ ಸಮ್ಮತ ಅಭ್ಯರ್ಥಿಗಳನ್ನು ಶೀಘ್ರವೇ ಪಕ್ಷ ಘೋಷಿಸುತ್ತದೆ ಎಂದಿದ್ದಾರೆ.


ಶಿರಾ ಕ್ಷೇತ್ರದಲ್ಲಿ ಸೂತಕದ ಮನೆಯಲ್ಲಿ ಚುನಾವಣೆ ಎದುರಿಸುತ್ತಿರುವುದು ದುರ್ವಿಧಿ. ಅನಿವಾರ್ಯವಾಗಿ ಚುನಾವಣೆ ಎದುರಿಸಬೇಕಾಗಿರುವುದು ನೋವಿನ ಸಂಗತಿ. ಬೇರೆ ಪಕ್ಷಗಳು ಇದನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಅವರಿಗೆ ಶಿರಾ ಕ್ಷೇತ್ರ ಲಾಭ-ನಷ್ಟದ ವಿಚಾರ. ಸತ್ಯನಾರಾಯಣ್ ಅವರ ನಿಧನದಿಂದಾಗಿರುವ ನೋವಿಗೆ ಗೆಲುವಿನ ಮೂಲಕ ಪರಿಹಾರ ಹುಡುಲು ಬಯಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.


ಶಿರಾ ಕ್ಷೇತ್ರ ಆಪರೇಷನ್ ಕಮಲದಿಂದ ಉಳಿಸಿಕೊಂಡ ಕ್ಷೇತ್ರವಾಗಿದೆ. ಬಿಜೆಪಿಯವರ ಆಮಿಷಕ್ಕೆ ಆಕರ್ಷಿತರಾಗದೇ ಸತ್ಯನಾರಾಯಣ್ ಅವರು ಕ್ಷೇತ್ರವನ್ನು ಪಕ್ಷಕ್ಕೆ ಉಳಿಸಿಕೊಟ್ಟಿದ್ದರು. ಸತ್ಯನಾರಾಯಣ್ ಅವರು ಬದುಕಿದಿದ್ದರೆ ಈಗಲೂ ಶಿರಾ ಜೆಡಿಎಸ್ ನದ್ದೇ ಆಗಿರುತ್ತಿತ್ತು. ನ್ಯಾಯಬದ್ಧವಾಗಿ ಶಿರಾ ತಾವು ಗೆಲ್ಲಬೇಕಾದ ಕ್ಷೇತ್ರ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈಗಾಗಲೇ ಶಿರಾ ಕ್ಷೇತ್ರಕ್ಕೆ ಸತ್ಯನಾರಾಯಣ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲು ಜೆಡಿಎಸ್ ನಿರ್ಧರಿಸಿದ್ದರೂ ಅಭ್ಯರ್ಥಿ ಯಾರು ಎಂಬುದಿನ್ನೂ ಪ್ರಕಟಿಸಿಲ್ಲ. ಕಾಂಗ್ರೆಸ್ ನಿಂದ ಶಿರಾಕ್ಕೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅಭ್ಯರ್ಥಿಯಾಗಿದ್ದಾರೆ.
2018 ರಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮುನಿರತ್ನಗೆ ಬಿಜೆಪಿಯಿಂದ ತುಳಸಿ ಮುನಿರಾಜುಗೌಡ ಪ್ರತಿಸ್ಪರ್ಧಿಯಾಗಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಮುನಿರಾಜುಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಕರಣವಿನ್ನೂ ವಿಚಾರಣೆ ಹಂತದಲ್ಲಿದೆ., ಆಪರೇಷನ್‌ ಕಮಲದ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್‌ ಸಿಗುವುದು ಬಹುತೇಕ ಖಚಿತವಾಗಿದೆ.

ಇದರಿಂದ ಟಿಕೆಟ್ ಆಕಾಂಕ್ಷಿಯಾಗಿರುವ ಮುನಿರಾಜುಗೌಡ ಕೆರಳಿದ್ದಾರೆ. ಪ್ರತಿಪಕ್ಷಗಳ ನಿರ್ಧಾರವೇನೆಂಬುದಿನ್ನೂ ಅಧಿಕೃತಗೊಂಡಿಲ್ಲ. ಮುನಿರಾಜುಗೌಡಗೆ ಟಿಕೆಟ್ ತಪ್ಪಿದ್ದರೆ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಪಾಳಯದಲ್ಲಿ ಭಿನ್ನಮತ ತಲೆದೋರುವ ಸಾಧ್ಯತೆಯಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter