ಮಾಹಿತಿ ಪಡೆಯಲು ಸ್ನೇಹಾ ತಂತ್ರಾಂಶ ಸಹಕಾರಿ

ಮಾಹಿತಿ ಪಡೆಯಲು ಸ್ನೇಹಾ ತಂತ್ರಾಂಶ ಸಹಕಾರಿ

ಬೆಳಗಾಯಿತು ವಾರ್ತೆ

ಹಾವೇರಿ: ಸ್ನೇಹಾ ಆಪ್‍ನ್ನು ಅಂಗನವಾಡಿ ಕೇಂದ್ರಗಳಿಗೂ ವಿಸ್ತರಿಸುವುದರಿಂದ ಮಕ್ಕಳು ಮತ್ತು ತಾಯಂದಿರಿಗೆ ನೀಡುವ ಸೇವೆ ಮತ್ತು ಇನ್ನಿತರ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ತರಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ದೇಸಾಯಿ ಅವರು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ನೇಹಾ ತಂತ್ರಾಂಶವನ್ನು ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ವಿತರಿಸಲು ಮಾಸ್ಟರ್ ಟ್ರೇನರ್‍ಗಳಿಂದ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ಮಹಿಳಾ ಮೇಲ್ವಿಚಾರಕಿಯರಿಗೆ ಗುರುವಾರದಂದು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜರುಗಿದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಮಕ್ಕಳ ಸೇವೆ, ತಾಯಂದಿರ ಸೇವೆ ಹಾಗೂ ಇತರೆ ಯೋಜನೆಗಳ ಸಮರ್ಪಕ ಅನುಷ್ಠಾನ ತರಲು ಹಾಗೂ ಮಾಹಿತಿಗಳನ್ನು ಆನ್‍ಲೈನ್ ಮೂಲಕ ಪಡೆಯಲು ಸ್ನೇಹಾ ತಂತ್ರಾಂಶ ರೂಪಿಸಲಾಗಿದೆ. ಈ ತಂತ್ರಾಂಶವನ್ನು ಅಂಗನವಾಡಿಗಳನ್ನು ಈ ತಂತ್ರಾಂಶ ವ್ಯಾಪ್ತಿಗೆ ತರವುದರ ಮೂಲಕ ಇಲ್ಲಿನ ಚಟುವಟಿಕೆಗಳ ಪಾರದರ್ಶಕತೆ ತರಲು ಸಹಕಾರಿಯಾಗಿದೆ ಎಂದು ಹೇಳಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ವೈ.ಶೆಟ್ಟೆಪ್ಪನವರ ಮಾತನಾಡಿದರು. ಕಾರ್ಯಕ್ರಮದಲ್ಲಿ ಸವಣೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಣ್ಣಪ್ಪ ಹೆಗಡೆ, ಶಿಗ್ಗಾಂವ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂತೋಷ್ ಎಚ್., ಹಾವೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಉಮಾ ಹಾಗೂ ಮೇಲ್ವಿಚಾರಕಿಯರು ಉಪಸ್ಥಿತರಿದ್ದರು.

ಪೋಷಣೆ ಮತ್ತು ಪರಿಣಾಮಕಾರಿ ಆರೋಗ್ಯ ಪರಿಹಾರ(ಸ್ನೇಹಾ) ತರಬೇತಿಯನ್ನು ಪಡೆದುಕೊಂಡು, ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಸ್ನೇಹಾ ತಂತ್ರಾಂಶವನ್ನು ಯಶಸ್ವಿಯಾಗಿ ಬಳಕೆಮಾಡುವಂತೆ ಅವರಲ್ಲಿ ಅರಿವು ಮೂಡಿಸಬೇಕು-ರಮೇಶ ದೇಸಾಯಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.