ಹೈನುಗಾರಿಕೆಯಲ್ಲಿ ಉತ್ತಮ ಅವಕಾಶವಿದೆ

ಹೈನುಗಾರಿಕೆಯಲ್ಲಿ ಉತ್ತಮ ಅವಕಾಶವಿದೆ

ಬೆಳಗಾಯಿತು ವಾರ್ತೆ

ರಾಯಚೂರು: ಎರಡು ನದಿಗಳು ಹರಿಯುವ ರಾಯಚೂರು ಜಿಲ್ಲೆ ಕೃಷಿ ಹಾಗೂ ಕೃಷಿ ಪೂರಕ ಚಟುವಟಿಕೆಗಳಿಗೆ ಪ್ರಶಸ್ತ್ಯವಾದ ತಾಣವಾಗಿದ್ದು, ಹೈನುಗಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಉತ್ತಮ ಚಟುವಟಿಕೆಗಳನ್ನು ರೂಪಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಗಿರುವ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಜಿ. ಕುಮಾರ ನಾಯಕ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಹೈನುಗಾರಿಕೆ ಉತ್ತೇಜನಕ್ಕೆ ಅಪಾರ ಅವಕಾಶಗಳಿವೆ. ಕೃಷಿಗೆ ಪೂರಕವಾಗಿರುವ ಈ ಚಟುವಟಿಕೆಗಳಿಂದ ರೈತರು ಆರ್ಥಿಕವಾಗಿ ಸಬಲರಾಗುತ್ತಾರೆ, ಈ ದಿಸೆಯಲ್ಲಿ ಅದಕ್ಕೆ ಪ್ರೋತ್ಸಾಹ ನೀಡಬೇಕಿದ್ದು, ಈ ಭಾಗದಲ್ಲಿ ಹೆಚ್ಚಿನ ರೀತಿಯಲ್ಲಿ ಪಶುಪಾಲನೆ, ಸ್ವಸಹಾಯ ಗುಂಪುಗಳ ರಚನೆ, ಡೈರಿ ಉತ್ಪನ್ನಗಳ ಕುರಿತು ತರಬೇತಿ ಹಾಗೂ ಡೈರಿಗಳ ಸ್ಥಾಪನೆಯಾಗಬೇಕಿರುತ್ತದೆ,

ಸ್ವ-ಸಹಾಯ ಸಂಘಗಳ ಸದಸ್ಯರ ಮೂಲಕ ಹಾಲನ್ನು ಡೈರಿಗಳಲ್ಲಿ ಸಂಗ್ರಹಿಸಬೇಕು, ಈ ಕಾರ್ಯ ನಿಯಮಿತವಾಗಿ ಆಗಬೇಕಾದರೆ ಕೆಎಂಎಫ್, ಪಶುಸಂಗೋಪನೆ ಇಲಾಖೆ, ಜಿಲ್ಲಾ ಪಂಚಾಯತ್, ಸಹಕಾರ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು, ಆ ಮೂಲಕ ರೈತರ ಆದಾಯವನ್ನು ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಡೈರಿ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಹಸುಗಳನ್ನು ನೀಡಿದರೆ ಉತ್ತಮ ಎಂದು ಅಭಿಪ್ರಾಯಪಟ್ಟರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮಾತನಾಡಿ, ಪ್ರತಿಯೊಂದು ಗ್ರಾಮದಲ್ಲೂ ಪ್ರಗತಿಪರ ರೈತರು ಇದ್ದೇ ಇರುತ್ತಾರೆ. ಅವರಿಗೆ ಹೈನುಗಾರಿಯಲ್ಲಿ ಸಬ್ಸಿಡಿ ನೀಡುವ ಮೂಲಕ ಉತ್ತೇಜನ ನೀಡುವಂತೆ ತಿಳಿಸಿದರು

. ಇದೇ ಸಂದರ್ಭದಲ್ಲಿ ಕಂದಾಯ, ಭೂ ದಾಖಲೆಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಕುರಿತ ಚರ್ಚೆ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ದುರುಗೇಶ್ ವೇದಿಕೆಯಲ್ಲಿದ್ದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಯೂಸೂಫ್ ಖಾನ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಪಿ.ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಡೈರಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಜಿಲ್ಲೆಯಲ್ಲಿ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರು ಈಗಾಗಲೇ ಡೈರಿ ಚಟುವಟಿಕೆಗಳನ್ನು ಕೈಗೊಳ್ಳಬಹುದಾದ ಗ್ರಾಮಗಳನ್ನು ಗುರುತಿಸಿರುತ್ತಾರೆ. ಜಿಲ್ಲಾ ಪಂಚಾಯತ್ ಹಾಗೂ ಪಿಡಿಒಗಳು ಸಹಕಾರ ನೀಡುವುದಾಗಿ ತಿಳಿಸಿರುತ್ತಾರೆ, ಸ್ವ-ಸಹಾಯ ಸಂಘಗಳ ನೋಂದಣಿಯು ಆರಂಭಗೊಂಡಿದ್ದು, ಸಂಘದ ಸದಸ್ಯರಿಗೆ ಹೈನುಗಾರಿಕೆ ಬಗ್ಗೆ ತರಬೇತಿ ನೀಡಲಾಗಿದೆ. ಪ್ರತಿಯೊಂದು ಹಳ್ಳಿಯಲ್ಲಿ 40 ಪ್ರಗತಿಪರ ರೈತರನ್ನು ಗುರುತಿಸಿ ಅವರಿಗೆ ತರಬೇತಿ ನೀಡಲಾಗಿದೆ. ವಿದೇಶಗಳಿಗೂ ಅವರನ್ನು ಕರೆದೊಯ್ದು ಹೈನುಗಾರಿಕೆ ಕುರಿತು ತರಬೇತಿ ನೀಡಲಾಗುವುದು – ಸುನೀಲ್, ಮ್ಯಾನೇಜರ್, ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಹಾಲು ಒಕ್ಕೂಟ

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.