ಪ್ರಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಸೋಂಕು ತಗುಲಿಲ್ಲ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ನಲ್ಲಿ ತಿಳಿಸಿದ್ದಾರೆ

ಇವರಲ್ಲಿ ಬೆಂಗಳೂರು, ಬೀದರ್, ಗುಲ್ಬರ್ಗ, ಬಳ್ಳಾರಿ ಭಾಗದವರು ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ ಎಂದು ಅವರು ತಿಳಿಸಿದ್ದಾರೆ.

ದೆಹಲಿಯ ಮಸೀದಿಯಲ್ಲಿ ಮಾ. 10ರಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ 24 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಲ್ಲಿ ತುಮಕೂರಿನ ಶಿರಾದಲ್ಲಿ ಇತ್ತೀಚಿಗೆ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ಕೂಡ ಸೇರಿದ್ದಾರೆ ಎನ್ನಲಾಗಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter