ಬುಡಾ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಸ್ಥಳಾಂತರ

Share on facebook
Share on twitter
Share on linkedin
Share on whatsapp
Share on email


ಬಳ್ಳಾರಿ: ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯು ಅಧ್ಯಕ್ಷ ದಮ್ಮೂರು ಶೇಖರ್ ನೇತೃತ್ವದಲ್ಲಿ ಬುಡಾ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
    ಜೂ.20ರಂದು ಜರುಗಿದ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯ ನಡವಳಿಗಳನ್ನು ಈ ಸಂದರ್ಭದಲ್ಲಿ ದೃಢಿಕರಿಸಿ ಸಭೆಯಲ್ಲಿ ಮಂಡಿಸಲಾಯಿತು.
ಬುಡಾದ ಜೂನ್ ಮಾಹೆಯ ಜಮಾ ಮತ್ತು ಖರ್ಚುಗಳ ವಿವರ ಪಟ್ಟಿಯನ್ನು ಚರ್ಚಿಸಲಾಯಿತು ಮತ್ತು ಅನುಮೋದಿಸಲಾಯಿತು.
    ಬುಡಾದ ಪ್ಯಾನೆಲ್ ನಲ್ಲಿ ವಕೀಲರನ್ನು ಸೇರಿಸಿಕೊಳ್ಳುವ ಹಾಗೂ ಕೆಲವು ವಕೀಲರ ಹೆಸರನ್ನೂ ಪ್ಯಾನೆಲ್ ನಿಂದ ರದ್ದುಗೊಳಿಸುವುದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಿತು.
    ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರೀಕ ಸೌಲಭ್ಯ ನಿವೇಶನವನ್ನು ಹಂಚಿಕೆ ಮಾಡಲು ಸಿ.ಎ ನಿವೇಶನ ಹಂಚಿಕೆ ಸಮಿತಿ ರಚಿಸಲು ಚರ್ಚಿಸಲಾಯಿತು.
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ನನ್ನು ಇದೇ ಆವರಣದ ಇನ್ನೊಂದು ಸ್ಥಳಕ್ಕೆ ಸ್ಥಳಾಂತರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
    ಬುಡಾದ 2020-21ನೇ ಸಾಲಿನ ಆಯುವ್ಯಯದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಸಂಬಂಧ ಕ್ರಿಯಾ ಯೋಜನೆಗೆ ಅನುಮೋದನೆ,ಬಳ್ಳಾರಿ ತಾಲೂಕಿನ ಬಿ.ಗೋನಾಳ್ ಗ್ರಾಮದ ಒಟ್ಟು 27 ರೈತರಿಂದ 101.98 ಎಕರೆ ಜಮೀನಿನಲ್ಲಿ 50:50ರ ಅನುಪಾತದಲ್ಲಿ ಪ್ರಾಧಿಕಾರ ಮತ್ತು ಖಾಸಗಿ ಸಹ ಭಾಗಿತ್ವದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸಲು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಆಗಿರುವ ಬಗ್ಗೆಯೂ ಚರ್ಚೆ ನಡೆಯಿತು.
   ಬಳ್ಳಾರಿ ನಗರದ ಉತ್ತರ ಭಾಗದ ರಾಷ್ಟ್ರೀಯ ಹೆದ್ದಾರಿ-63ರಿಂದ ಪ್ರಸ್ತಾಪಿತ ವಿಮಾನ ನಿಲ್ದಾಣಕ್ಕೆ ಸಂಪರ್ಕ ರಸ್ತೆಯನ್ನು ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ದಮ್ಮೂರು ಅವರು ಸಭೆಯಲ್ಲಿ ಪ್ರಸ್ತಾಪಿಸಿದರು.
    ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅನಧಿಕೃತ ಬೆಳವಣಿಗೆಗಳು ನಡೆಯುತ್ತಿದ್ದು,ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆದವು.
ಖಾಸಗಿ ವಸತಿ ವಿನ್ಯಾಸದ ಅಂತಿಮ ಹಂತದ ನಿವೇಶನವನ್ನು ಬಿಡುಗಡೆ ಮಾಡುವುದು, ಕೈಗಾರಿಕೆ ಬಹುನಿವೇಶನ ವಿನ್ಯಾಸ ನಕ್ಷೆ ಅನುಮೋದನೆ, ಖಾಸಗಿ ವಸತಿ ವಿನ್ಯಾಸ ನಕ್ಷೆ ಅನುಮೋದನೆ ನೀಡಲು, ಜಮೀನುಗಳ ಮಾರ್ಪಡಿತ ವಸತಿ ವಿನ್ಯಾಸ ನಕ್ಷೆ ಮಂಜೂರಾತಿ ಕೋರಿರುವ ಅರ್ಜಿಗಳು, ಏಕ ನಿವೇಶನ ವಸತಿ ವಿನ್ಯಾಸ ಕೋರಿ ಮನವಿ, ಏಕ ನಿವೇಶನ ವಾಣಿಜ್ಯ ವಿನ್ಯಾಸ ನಕ್ಷೆ ಮಂಜೂರು ಕೋರಿರುವ ಅರ್ಜಿಗಳ ಬಗ್ಗೆ ಸಭೆಯಲ್ಲಿ ಸುಧೀರ್ಘ ಚರ್ಚೆಗಳು ನಡೆದವು.
ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 14(ಎ) ರನ್ವಯ ಭೂ- ಉಪಯೋಗ ಬದಲಾವಣೆ ಪ್ರಕರಣಗಳ ಜೊತೆಗೆ ಇನ್ನಿತರ ವಿಷಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆದವು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕರಾದ ಗಾಲಿ ಸೋಮಶೇಖರ್ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಸಿ ಕೊಂಡಯ್ಯ, ಅಪರ ಜಿಲ್ಲಾಧಿಕಾರಿಗಳಾದ ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದಾರ, ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರರಾದ ರವಿಶಂಕರ್ ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ಹಾಜರಿದ್ದರು.
*-*-*

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter