ಗರ್ಭೀಣಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸಲಹೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ಹಿಂದಿನ ಕಾಲದಲ್ಲಿ ಸರಿಯಾದ ವ್ಯವಸ್ಥೆಯಿಲ್ಲದ ಕಾರಣ ಮನೆಯಲ್ಲಿ ಹೆರಿಗೆ ಮಾಡಿಸುವ ಕಾರ್ಯಗಳು ನಡೆಯುತ್ತಿದ್ದವು, ಸದ್ಯ ಪರಿಸ್ಥಿತಿ ಬದಲಾವಣೆಯಾಗಿದ್ದು ಗರ್ಭೀಣಿಯರು ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು ಮತ್ತು ಇದು ಸುರಕ್ಷಿತವು ಕೂಡ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು ಸಲಹೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗರ್ಭೀಣಿ ಮಹಿಳೆಯರಿಗೆ ಮನೆಗಳಲ್ಲಿ ಹೆರಿಗೆ ಮಾಡಿಸುವುದು ಉತ್ತಮವಾದುದಲ್ಲ. ಇದರಿಂದ ರಕ್ತದ ಪರಿಚಲನೆ, ಕಡಿಮೆ ರಕ್ತದ ಒತ್ತಡ, ತುರ್ತಾಗಿ ರಕ್ತದ ಅವಶ್ಯಕತೆಯಿದ್ದಾಗಿ ಮನೆಗಳಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕಾಲ ಕಾಲಕ್ಕೆ ಆರೋಗ್ಯದ ಬೆಳವಣಿಗೆ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು ಹಾಗೂ ಹೆರಿಗೆಯನ್ನು ಆಸ್ಪತ್ರೆಗಳಲ್ಲಿ ಮಾಡಿಸಿಕೊಳ್ಳಬೇಕು. ಇದರಿಂದ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ಜಿಲ್ಲೆಯ ಹೊಸಪೇಟೆಯಲ್ಲಿ 4, ಕೂಡ್ಲಿಗಿ 2, ಸಂಡೂರು 2, ಹಡಗಲಿ 1, ಹಾಗೂ ಸಿರುಗುಪ್ಪ ತಾಲೂಕಿನಲ್ಲಿ 1 ಮಾತ್ರ ಮನೆಯಲ್ಲಿ ಹೆರಿಗೆಯಾಗಿರುವ ಬಗ್ಗೆ ವರದಿಯಾಗಿದ್ದು, ತಾಲೂಕು ಆರೋಗ್ಯಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಎಂದ ಹೇಳಿದ ಅವರು ಜಿಲ್ಲೆಯಲ್ಲಿ ಈಗಾಗಲೇ 8 ಮಹಿಳೆಯರು ಹೆರಿಗೆ ಆದ ನಂತರ ಸಾವಪ್ಪಿರುವುದರ ಮಾಹಿತಿ ಇದೆ ಎಂದರು. ಗರ್ಭ ಧರಿಸಿದ ಮಹಿಳೆಯರಿಗೆ ಪೌಷ್ಠಿಕ ಆಹಾರ ಸೇವನೆ ಬಗ್ಗೆ ಮಾಹಿತಿ ನೀಡಿ, ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಲಹೆ-ಸೂಚನೆ ನೀಡಬೇಕು ಎಂದರು.

ಗಭೀರ್ಣಿಯಾದ ಮಹಿಳೆಯರಿಗೆ ಶೇ.100ರಷ್ಟು ತಾಯಿ ಕಾರ್ಡ್ ತಲುಪುವಂತೆ ಆಶಾ ಕಾರ್ಯಕರ್ತೆರು ನೋಡಿಕೊಳ್ಳಬೇಕು. ತಾಯಿ ಕಾರ್ಡ್ ಇಲ್ಲವಾದ್ರೆ ಮುಂದಿನ ಕ್ರಮ ತೆಗೆದುಕೊಳ್ಳಲು ಸಮಸ್ಯೆಯಾಗುತ್ತದೆ; ಆದ ಕಾರಣ ತಾಯಿ ಕಾರ್ಡ್‍ನ್ನು ಕಡ್ಡಾಯವಾಗಿ ನೀಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಿ ಎಂದರು.

ಜಿಲ್ಲೆಯಲ್ಲಿ ಜನವರಿಯಿಂದ ಜೂನ್ ಮಾಹೆವರೆಗೆ 7849 ಹೆರಿಗೆಗಳಾಗಿವೆ. ಇದರಲ್ಲಿ 10 ಮನೆಯಲ್ಲಿ ಹೆರಿಗೆ ಮಾಡಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ವಿವರಿಸಿದರು.

ಸಭೆಯಲ್ಲಿ ಹೆರಿಗೆಯಾದ ನಂತರ ಮರಣ ಹೊಂದಿದ ಮಹಿಳೆಯ ಸಂಬಂಧಿಕರನ್ನು ಕರೆಸಿಕೊಂಡು ಹೆರಿಗೆ ಸಂದರ್ಭದಲ್ಲಿ

ಆದ ನೈಜ ವಾಸ್ತವಾಂಶವನ್ನು ಇದೇ ಸಂದರ್ಭದಲ್ಲಿ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ನಿತೀಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು

Leave a Reply

Your email address will not be published. Required fields are marked *