ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ತುರ್ತು ಪ್ರಕರಣಗಳ ವಿಚಾರಣೆ ಮಾತ್ರ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ : ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರ ಸೂಚನೆಯಂತೆ‌ ಮಾರ್ಚ್ 24 ರಿಂದ ಏಪ್ರಿಲ್‌ 6 ರವರೆಗೆ ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆ ಮಾಡಲಾಗುತ್ತಿದ್ದು, ಅಂತಹ ಪ್ರಕರಣಗಳ ಕಕ್ಷಿದಾರರು, ವಕೀಲರು ಮಾತ್ರ ನ್ಯಾಯಾಲಯಕ್ಕೆ ಆಗಮಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರನ್ಯಾಯಾಧೀಶರಾದ ಕೃಷ್ಣರಾಜ ಬಿ.ಅಸೋಡೆ ಅವರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. Bellary Belagayithu

ಜಾಮೀನು ಅರ್ಜಿ ಸೇರಿದಂತೆ ತುರ್ತು ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ಕೈಗೆತ್ತಿಕೊಳ್ಳುತ್ತಿದ್ದೇವೆ. ಅದೇ ರೀತಿ ತಾಲ್ಲೂಕು ನ್ಯಾಯಾಲಯಗಳಿಗೂ ಸೂಚಿಸಿದೆ. ಇದಲ್ಲದೆ ಕೆಲ ಪ್ರಕರಣಗಳಲ್ಲಿ ಸಾಕ್ಷಿದಾರರು ಆರೋಪಿಗಳು ಬರದಿದ್ದರೂ ಸದ್ಯ ವ್ಯಾಧಿ ನಿಯಂತ್ರಣಕ್ಕೆ ಬರುವವರೆಗೆ ಅಂತವರಿಗೆ ಗೈರು ಎಂದು ಪರಿಗಣಿಸದಿರಲು ನಿರ್ಧರಿಸಲಾಗಿದೆ. ಇನ್ನು ಜೈಲಿನಲ್ಲಿರುವ ಆರೋಪಿಗಳ ವಿಚಾರಣೆ ಆಗತ್ಯವಿದ್ದರೆ ವೀಡಿಯೋ ಕಾನ್ಫರೆನ್ಸ್ ಮುಖಾಂತರ ವಿಚಾರಣೆ ನಡೆಸಲಾಗುತ್ತದೆ ಎಂದು ವಿವರಿಸಿದರು.

ಜೈಲಿಗೆ ಬರುವ ಜನರಿಗೂ ಹೊರಗಡೆ ಕೈತೊಳೆದುಕೊಳ್ಳಲು ಒಳಗಿನವರಿಗೂ ಸ್ವಚ್ಛತೆಯಿಂದ ಇರಿಸಲು ಜೈಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದ ಅವರು ಕರೋನಾ ನಿಯಂತ್ರಣ ವಿಷಯದಲ್ಲಿ ಮಾಧ್ಯಮಗಳ ಪಾತ್ರವನ್ನು ಇದೇ ಸಂದರ್ಭದಲ್ಲಿ ಶ್ಲಾಘಿಸಿದರು.

ಈ ಸಂದರ್ಭದಲ್ಲಿ 1ನೇ ಹೆಚ್ಚುವರಿ ನ್ಯಾಯಾಧೀಶರಾದ ಕಾಸಿಂ ಚೂರಿಖಾನ್, ಜಿಲ್ಲಾ ನ್ಯಾಯಾಲಯಗಳ ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್ ಎಸ್ ಮಲ್ಲೂರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಂ.ಅಂಕಲಯ್ಯ ಸೇರಿದಂತೆ ಮತ್ತಿತರರು ಇದ್ದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter