ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ: ಬಂಧನ

Share on facebook
Share on twitter
Share on linkedin
Share on whatsapp
Share on email

ಬಳ್ಳಾರಿ: ಕೋವಿಡ್-19 ಸೊಂಕು ವ್ಯಾಪಿಸಬಾರದು ಮತ್ತು ಸಾಮಾಜಿಕ ಅಂತರ ಪರಿಪಾಲಿಸಿ ಸೊಂಕಿನ ಸರಪಳಿಗೆ ಇತಿಶ್ರೀ ಹಾಡಬೇಕು ಎಂಬ ಸದುದ್ದೇಶದಿಂದ ಸರಕಾರ ಜಾರಿಗೆ ತಂದ 144 ಸೆಕ್ಷನ್ ನ ಸಂಪೂರ್ಣ ಉಲ್ಲಂಘನೆಯಾಗಿದ್ದು, ಸ್ಥಳಕ್ಕೆ ಸಾಮಾಜಿಕ ಅಂತರ ಪಾಲಿಸುವ ಲಾಕ್ ಡೌನ್ ಉದ್ದೇಶ ವಿವರಿಸಲು ಬಂದ ಪೊಲೀಸರಿಬ್ಬರ ಮೇಲೆಯೇ ಹಲ್ಲೆ ಮಾಡಿ ಸರಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಘಟನೆ ಸಂಡೂರು ತಾಲೂಕಿನ ತಾರಾನಗರದಲ್ಲಿ ಭಾನುವಾರ ನಡೆದಿದೆ.
144ಸೆಕ್ಷನ್ ಉಲ್ಲಂಘನೆ ಹಾಗೂ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆಧಾರದ ಮೇರೆಗೆ ನಾಲ್ವರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಇದರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಪಂ ಸದಸ್ಯ ಮಂಜುನಾಥ ಹಾಗೂ ಅಲ್ತಾಫ್ ಎನ್ನುವವರನ್ನು ಬಂಧಿಸಲಾಗಿದೆ. ನಿಂಗಪ್ಪ,ಗಣೇಶ ಅವರನ್ನು ಕೂಡ ಶೀಘ್ರವಾಗಿ ಬಂಧಿಸಲಾಗುವುದು. ಇವರ ವಿರುದ್ಧ ಸೆಕ್ಷನ್ 353,188,270,341,504 ಖ/W ಹಾಗೂ ಇನ್ನೀತರ ಸೆಕ್ಷನ್ ಗಳಡಿ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ಸಿ.ಕೆ.ಬಾಬಾ ಅವರು ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ವಿವರಿಸಿದ್ದಾರೆ. ಅತ್ಯಂತ ಬೇಸರವಾಗಿರುವ ವಿಷಯವೆಂದರೇ ಅದರಲ್ಲಿ ಒಬ್ಬರು ಗ್ರಾಪಂ ಸದಸ್ಯರಾಗಿರುವುದು ಎಂದರು.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter