ನೋವೆಲ್ ಕರೋನಾ ವೈರಸ್ ಮುಂಜಾಗ್ರತಾ ಕ್ರಮಗಳು

ನೋವೆಲ್ ಕರೋನಾ ವೈರಸ್ ಮುಂಜಾಗ್ರತಾ ಕ್ರಮಗಳು

ಇತ್ತೀಚಿಗೆ ಹರಡಿರುವ ನೋವೆಲ್ ಕರೋನಾ ವೈರಸ್(2019-ಎನ್.ಸಿ.ಓ.ವಿ) ಕಾಯಿಲೆ ಬಗ್ಗೆ ಸಾರ್ವಜನಿಕರು ಮುಂಜಾಗ್ರತ ಕ್ರಮಗಳನ್ನು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ನೋವೆಲ್ ಕರೋನಾ ವೈರಸ್ ಪ್ರಾಣಿಗಳಲ್ಲಿ ಮತ್ತು ಮನುಷ್ಯರಲ್ಲಿ ಮುಖ್ಯವಾಗಿ ಶ್ವಾಸಕೋಶ ಹಾಗೂ ಉಸಿರಾಟಕ್ಕೆ ತೊಂದರೆ ಉಂಟು ಮಾಡುತ್ತದೆ. ಈ ವೈರಸ್ ಮೊದಲ ಬಾರಿಗೆ ಚೀನಾದ ವುಹಾನ್‍ನಲ್ಲಿ ಪತ್ತೆಯಾಗಿದೆ.

ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ರೀತಿ:
ಸೋಂಕಿತ ವ್ಯಕ್ತಿಯು ಸೀನಿದಾಗ ಮತ್ತು ಕೆಮ್ಮಿದಾಗ, ನಿಕಟ ಸಂಪರ್ಕದಲ್ಲಿರುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆಯಿಲ್ಲದೆ ಬಳಸಿದಾಗ, ಸ್ವಚ್ಛಗೊಳಿಸದ, ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು ಬಾಯಿಯನ್ನು ಮುಟ್ಟುವುದರಿಂದ ಹರಡುತ್ತದೆ.

ಸೋಂಕಿನ ಲಕ್ಷಣಗಳು:
ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ನ್ಯೂಮೋನಿಯಾ, ಭೇದಿ.

ಅನುಸರಿಸಬೇಕಾದ ಮುಂಜಾಗ್ರತ ಕ್ರಮಗಳು:
ಸೋಂಕು ಪೀಡಿತರ ಸಂಪರ್ಕದಿಂದ ದೂರವಿರುವುದು, ಶಂಕಿತ ರೋಗಿಯು ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್ ಲೇಯರ್ ಮಾಸ್ಕ್ ಬಳಸುವುದು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ವಿಶೇಷವಾಗಿ ಸಾಬೂನಿನಿಂದ ಕೈತೊಳೆದುಕೊಳ್ಳುವುದು, ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್, ಕೈ ವಸ್ತ್ರ ಉಪಯೋಗಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು, ಉಸಿರಾಟದ ತೊಂದರೆಯಾದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯುವುದು, ಮಾಂಸ, ಮೊಟ್ಟೆ ಇತ್ಯಾದಿಗಳನ್ನು ಚೆನ್ನಾಗಿ ಬೇಯಿಸಿ ಉಪಯೋಗಿಸುವುದು, ಆಸುರಕ್ಷತಿವಲ್ಲದ ಕಾಡು ಪ್ರಾಣಿ ಅಥವಾ ಸಾಕು ಪ್ರಾಣಿಗಳನ್ನು ಮುಟ್ಟಬೇಡಿ.

ಹೆಚ್ಚಿನ ಮಾಹಿತಿಗಾಗಿ 24×7 ಉಚಿತ ಆರೋಗ್ಯ ಸಹಾಯವಾಣಿ 104 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.