ಕೊರೋನಾ ವೈರಸ್ : ಬೆಂಗಳೂರು ಉಸ್ತುವಾರಿ ಡಾ. ಸುಧಾಕರ್ ಗೆ, ಇಡೀ ರಾಜ್ಯದ ಜವಾಬ್ದಾರಿ ರಾಮುಲು ಅವರಿಗೆ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ ಜವಾಬ್ದಾರಿಯನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ನೀಡಿದ್ದು, ಬೆಂಗಳೂರು ಮಹಾನಗರದ ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ವಹಿಸಲಾಗಿದೆ. ಜತೆಗೆ ಶ್ರೀರಾಮುಲು ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜತೆಗೆ ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆಯನ್ನು ಹೆಚ್ಚುವರಿಯಾಗಿ ನೀಡಿದ್ದಾರೆ. ಖಾತೆಗಳ ಪುನರ್ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿಫಾರಸ್ಸಿಗೆ ರಾಜ್ಯಪಾಲ ವಜೂಭಾಯಿ ವಾಲಾ ಅನುಮೋದನೆ ನೀಡಿದ್ದು, ಇದು ರಾಜ್ಯಪತ್ರದಲ್ಲಿ ಪ್ರಕಟವಾಗಿದೆ.

ಮುಖ್ಯಮಂತ್ರಿ ಅವರ ತೀರ್ಮಾನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ತಮಗೆ ಬೆಂಗಳೂರು ನಗರದಲ್ಲಿ ಕೋವಿಡ್ – 19 ನಿಯಂತ್ರಿಸುವ ಜವಾಬ್ದಾರಿಯನ್ನು ಸೀಮಿತಗೊಳಿಸಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವ ರಾಮುಲು ಅವರು ಹಿರಿಯರಿದ್ದು, ಅವರಿಗೆ ಇಡೀ ರಾಜ್ಯದ ಜವಾಬ್ದಾರಿ ವಹಿಸುವುದು ಸೂಕ್ತ. ಅವರು ಅಥವಾ ಯಾರಾದರೂ ಒಬ್ಬರಿಗೆ ಇಂತಹ ಉಸ್ತುವಾರಿ ವಹಿಸಿದರೆ ಮುತುವರ್ಜಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರು ಹೊರಡಿಸಿರುವ ಆದೇಶದ ಪ್ರಕಾರ, ಶ್ರೀರಾಮಲು ಅವರು ಡಾ. ಸುಧಾಕರ್ ಅವರ ಚಿಕ್ಕಬಳ್ಳಾಪುರ ಒಳಗೊಂಡಂತೆ ಇಡೀ ರಾಜ್ಯದ ಜವಾಬ್ದಾರಿ ನೋಡಿಕೊಳ್ಳಲಿದ್ದಾರೆ. ಇದು ಸುಧಾಕರ್ ಅವರ ಆಕ್ಷೇಪಕ್ಕೆ ಕಾರಣ ಎನ್ನಲಾಗಿದೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter