ಪೊಲೀಸರು ತುರ್ತು ಸಿಬ್ಬಂದಿಗೆ ಅಡ್ಡಪಡಿಸಿದರೆ 100ಕ್ಕೆ ಕರೆ ಮಾಡಿ

Share on facebook
Share on twitter
Share on linkedin
Share on whatsapp
Share on email

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಒಂದು ವೇಳೆ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿಗೆ ಪೊಲೀಸರು ಅಡ್ಡಿಪಡಿಸಿದರೆ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಿ ಮಾಹಿತಿ ನೀಡಿ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಹೀಗಾಗಿ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿಗೆ ಸಂಚರಿಸಲು ಪೊಲೀಸರು ಅಡ್ಡಿಪಡಿಸುತ್ತಿರುವ ಕುರಿತು ದೂರು ಬರುತ್ತಿವೆ. ಹೀಗಾಗಿ ವೈದ್ಯರು, ಪತ್ರಕರ್ತರು ಸೇರಿದಂತೆ ತುರ್ತು ಸೇವೆ ಸಲ್ಲಿಸುವ ಸಿಬ್ಬಂದಿ ಸಂಚಾರದ ವೇಳೆ ತಮ್ಮ ಸಂಸ್ಥೆಯ ಐಡಿ ಕಾರ್ಡ್ ಇಟ್ಟುಕೊಂಡು ಓಡಾಡಬೇಕು. ಕೆಲವರು ಸುಖಾ ಸುಮ್ಮನೆ ರಸ್ತೆ ಮೇಲೆ ಹೊರಗಡೆ ತಿರುಗಾಡುತ್ತಿದ್ದಾರೆ. ಹೀಗಾಗಿ ತುರ್ತು‌ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದವರು ಐಡಿ ಕಾರ್ಡ್, ಕಂಪನಿಯ ಸಮವಸ್ತ್ರ ಅಥವಾ ಕೋವಿಡ್ -19 ತುರ್ತು ಸೇವೆ ಬ್ಯಾನರ್ ಹಾಕಿಕೊಂಡು ಹೊರಗಿ ಬನ್ನಿ ಎಂದು ಸಲಹೆ ನೀಡಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter