ಜಿಲ್ಲಾಧ್ಯಕ್ಷರಾಗಿ ಎನ್.ಟಿ. ಬೊಮ್ಮಣ್ಣ ಪದಗ್ರಹಣ

ಜಿಲ್ಲಾಧ್ಯಕ್ಷರಾಗಿ ಎನ್.ಟಿ. ಬೊಮ್ಮಣ್ಣ ಪದಗ್ರಹಣ


ಬೆಳಗಾಯಿತು ವಾರ್ತೆ
ಬಳ್ಳಾರಿ
: ಜೆಡಿಎಸ್ ಪಕ್ಷವು ಒಂದು ಟ್ರೈನಿಂಗ್ ಸ್ಕೂಲ್ ಇದ್ದಂತೆ , ಇಲ್ಲಿಂದಲೇ ಹೋಗಿ ಸಿದ್ದರಾಮಯ್ಯ, ರೇವಣ ಸಿದ್ದಯ್ಯ, ಸಂತೋಷ್‍ಲಾಡ್, ಸೂರ್ಯ ನಾರಾಯಣ ರೆಡ್ಡಿ ಮೊದಲಾದವರು ಉನ್ನತ ಸ್ಥಾನವನ್ನು ಅಲಂಕರಿಸಿದ್ದಾರೆ ಎಂದು ನೂತನ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ಅವರು ಹೇಳಿದರು.

ನಗರದ ಜೆಡಿಎಸ್ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪದಗ್ರಹಣ ಸಮಾರಂಭದಲ್ಲಿ ಸುದ್ದಿಗೋಷ್ಟಿ ನಡೆಸಿ ಅವರು ಮಾತನಾಡಿದರು.

ವಿಜಯನಗರ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸಲಾಗುವುದು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಚರಿಸಿ ಪಕ್ಷಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಎನ್.ಎಂ.ನಬೀ ಸಾಬ್, ನೂರ್ ಅಹಮದ್, ಲಕ್ಷ್ಮಿಕಾಂತರೆಡ್ಡಿ, ದೀಪಕ್‍ಸಿಂಗ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

administrator

Related Articles

Leave a Reply

Your email address will not be published. Required fields are marked *

Copyright © 2019 Belagayithu | All Rights Reserved.