ರೈತರಿಗೆ ಸುಸಜ್ಜಿತ ಮಾರುಕಟ್ಟೆ

Share on facebook
Share on twitter
Share on linkedin
Share on whatsapp
Share on email

ಬೆಳಗಾಯಿತು ವಾರ್ತೆ
ಮಂಗಳೂರು
: ರೈತರಿಗಾಗಿ ಸುಸಜ್ಜಿತ ಮಾರುಕಟ್ಟೆ ಸೌಲಭ್ಯಗಳನ್ನು ರಾಜ್ಯಾದ್ಯಂತ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ಎಪಿಎಂಸಿಯಲ್ಲಿ ರೈತರಿಗೆ ಅನುಕೂಲ ಕಲ್ಪಿಸಲು ಕಾನೂನಿಗೆ ಕೆಲವು ತಿದ್ದುಪಡಿಗಳನ್ನು ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವರ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ.

ದಕ್ಷಿಣ ಜಿಲ್ಲೆಯ ಪ್ರವಾಸದಲ್ಲಿರುವ ಎಸ್‌.ಟಿ.ಸೋಮಶೇಖರ್‌ ಬುಧವಾರದಂದು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು, ದೇವಸ್ಥಾನದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಬಳಿಕ ಬೆಳ್ತಂಗಡಿ ಕೃಷಿ ಮಾರಾಟ ಇಲಾಖೆಯ ಕೃಷಿ ಉತ್ಪನ್ನ ಮಾರಾಟ ಸಮಿತಿಯಲ್ಲಿ 3.50 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಗೋದಾಮು, ಹರಾಜುಕಟ್ಟೆ, ಕಾಂಕ್ರೀಟ್‌ ರಸ್ತೆಗಳ ಉದ್ಘಾಟನಾ ಸಮಾರಂಭವನ್ನು ಆಧುನಿಕ ಕೃಷಿ ಯಂತ್ರದಿಂದ ಗ್ದೆಯಲ್ಲಿ ಭತ್ತದ ಪೈರನ್ನು ನಾಟಿ ಮಾಡುವ ಮೂಲಕ ಚಾಲನೆ ನೀಡಿದ ಬಳಿಕ ಮಾತನಾಡಿದರು.

ರೈತರು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಲಾಭವನ್ನು ಗಳಿಸಬೇಕು. ರೈತಪರ, ಜನಪರವಾದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರೈತರಿಗೋಸ್ಕರ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ರೈತ ಬಾಂಧವರು ಅದನ್ನು ಸದುಪಯೋಗಪಡಿಸಿಕೊಂಡು ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕು.ಸಹಕಾರ ಸಂಘಗಳು, ಬ್ಯಾಂಕುಗಳು ರೈತರ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವಂತೆ ಇದೇ ಸಂದರ್ಭದಲ್ಲಿ ಕರೆ ನೀಡಿದರು.
ಸಹಕಾರ ಸಂಘಗಳಿಂದ ಮಾಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಬಡ್ಡಿ ಮನ್ನಾ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಲು ಸಚಿವರು ಕರೆ ನೀಡಿದರು.

ಈ ಯೋಜನೆಯಿಂದ 92,525 ರೈತ ಸದಸ್ಯರು ಅಂದಾಜು 466. ಕೋಟಿ ರೂ.ಗಳ ಬಡ್ಡಿ ಮನ್ನಾ ಲಾಭವನ್ನು ಪಡೆಯಲಿದ್ದಾರೆ ಎಂದು ತಿಳಿಸಿದರು.ಬಳಿಕ ಸಂಜೆ ಅವರು ದಕ್ಷಿಣ ಕನ್ನಡ ಬಿಜೆಪಿ ಕಚೇರಿ ಹಾಗೂ ರ್ಆಎಸ್‌ಎಸ್‌ ಕಚೇರಿಗೆ ಭೇಟಿ ನೀಡಲಿದ್ದಾರೆ.

ಬಜೆಟ್‌ ಅಧಿವೇಶನದ ಬಳಿಕ ರಾಜ್ಯದ ಎಲ್ಲಾ ಎಪಿಎಂಸಿ ಸದಸ್ಯರುಗಳ ಒಂದು ರಾಜ್ಯಮಟ್ಟದ ವಿಚಾರ ಸಂಕೀರ್ಣವನ್ನು ಏರ್ಪಡಿಸಿ ಸುಸಜ್ಜಿತ ಮಾರುಕಟ್ಟೆ ಸಾಧನ-ಬಾಧಕಗಳ ಬಗ್ಗ ಚರ್ಚಿಸಲಾಗುವುದು. ರೈತರನ್ನು ಭಾರತದರ್ಶನ ಕಾರ್ಯಕ್ರಮಕ್ಕೆ ಕಳುಹಿಸಿಕೊಡುವ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು -. ಎಸ್‌.ಟಿ.ಸೋಮಶೇಖರ್‌ , ಸಚಿವ

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter