ಲಾಕ್ ಡೌನ್ ಹೊರತಾಗಿ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಕರೆ

Share on facebook
Share on twitter
Share on linkedin
Share on whatsapp
Share on email

ವಾಷಿಂಗ್ಟನ್: ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಾಣು ಸೋಂಕು ನಿಯಂತ್ರಣ ಸಂಬಂಧ ರಾಷ್ಟ್ರಗಳು ಲಾಕ್ ಡೌನ್ ಹೊರತಾಗಿ ಇನ್ನಷ್ಟು ಸಿದ್ಧತೆ ಮಾಡಿಕೊಂಡು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಡಬ್ಲ್ಯು ಎಚ್ ಒ ಮಹಾನಿರ್ದೇಶಕ ಟೆಡ್ರೋಸ್ ಅಧನಂ ಘೆಬ್ರೆಯೆಸಸ್ ಒತ್ತಿ ಹೇಳಿದ್ದಾರೆ.

ಕೋವಿಡ್ 19 ಸಾಂಕ್ರಾಮಿಕ ರೋಗದ ಸವಾಲನ್ನು ಸಮರ್ಥವಾಗಿ ನಿಭಾಯಿಸಲು ನವೀನ ಕ್ರಮಗಳನ್ನು ಕಂಡುಕೊಳ್ಳುವಂತೆ ಅವರು ಎಲ್ಲ ರಾಷ್ಟ್ರಗಳಿಗೆ ಸಲಹೆ ನೀಡಿದ್ದಾರೆ. ಈ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ರಾಷ್ಟ್ರಗಳು ಕ್ರಮ ಕೈಗೊಳ್ಳುವುದನ್ನು ನಿಧಾನ ಮಾಡಿದವು ಎಂದು ಅವರು ಆರೋಪಿಸಿದ್ದಾರೆ.ಈಗಲೂ 150 ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ 100 ಕ್ಕೂ ಕಡಿಮೆ ಪ್ರಕರಣಗಳು ದಾಖಲಾಗಿದ್ದು ಈ ಸೋಂಕು ಹರಡದಂತೆ ಕೂಡಲೇ ಜಾಗ್ರತೆ ವಹಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ಹಲವು ರಾಷ್ಟ್ರಗಳು ಎಲ್ಲ ಬಗೆಯ ಕಾರ್ಯಗಳಿಗೂ ನಿರ್ಬಂಧ ಹೇರಿರುವ ಕ್ರಮವನ್ನು ಶ್ಲಾಘಿಸಿರುವ ಅವರು, ಇದರ ಜೊತೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡರೆ ಮಾತ್ರ ಕೊರೊನಾ ವಿರುದ್ಧದ ಹೋರಾಟದಲ್ಲಿ ಯಶಸ್ಸು ಸಾಧ್ಯ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಟೆಡ್ರೋಸ್ ಹಲವು ಕ್ರಮಗಳ ಬಗೆಗೂ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.ವೃತ್ತಿಪರ ಕೌಶಲ್ಯಯುತ ಆರೋಗ್ಯ ಕಾರ್ಯಕರ್ತರ ಅಗತ್ಯವಿದ್ದು ಅವರುಗಳನ್ನು ಸೂಕ್ತ ಸ್ಥಳಗಳಲ್ಲಿನಿಯೋಜಿಸಬೇಕಿದೆ. ಪ್ರತ್ಯೇಕವಾಗಿರಿಸುವ ಕೋಣೆಗಳ ಬಗೆಗೂ ಗಮನಹರಿಸಬೇಕಿದೆ ಎಂದು ಅವರು ಹೇಳಿದ್ದಾರೆ.

Share on facebook
Share on twitter
Share on linkedin
Share on whatsapp
Share on email

Leave a Reply

Your email address will not be published. Required fields are marked *

Stay Connected

Newsletter